ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಟಯರ್ ಕಳಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ನಡೆದಿದೆ.
ಉಡುಪಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಆಗುಂಬೆ ಸಮೀಪ ಬರುತ್ತಿದ್ದಂತೆ ಏಕಾಏಕಿ ಬಸ್ನ ಟಯರ್ ಕಳಚಿ ಬಿದ್ದಿದೆ.
ಬಸ್ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಟಯರ್ ಕಳಚಿದ ತಕ್ಷಣವೇ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ನ್ನು ನಿಲ್ಲಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಯಾವುದೇ ಅವಘಡ ಸಂಭವಿಸದೆ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
