Sunday, October 18, 2026
Sunday, October 18, 2026

ಎಸ್ಎಸ್ಎಲ್ ಸಿ ಪರೀಕ್ಷೆ ಮಾರ್ಚ್ 28 ಕ್ಕೆ ಪ್ರಾರಂಭ

Date:

ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ. 2021 -22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಬೆಳಿಗ್ಗೆ 10. 30 ರಿಂದ ಮಧ್ಯಾಹ್ನ 1.45 ರವರೆಗೆ ಪರೀಕ್ಷೆ ಸಮಯವಾಗಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ಈ ಮುಂಚೆ ಪ್ರೌಢ ಶಿಕ್ಷಣ ಮಂಡಳಿಯು ಮುಖ್ಯಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.

ಕಳೆದ ಬಾರಿ ಕೊರೊನಾ ಸೋಂಕು ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಗಳನ್ನು ಸರಳಗೊಳಿಸಿತ್ತು. ಆದರೆ ಈ ಬಾರಿ ಕೋವಿಡ್ ಪಾಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2022 ನೇ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮಾರ್ಚ್ 28ರಿಂದ ಪರೀಕ್ಷೆ ಪ್ರಾರಂಭಗೊಳ್ಳಲಿದೆ. ಏಪ್ರಿಲ್ 11ರಂದು ಕೊನೆಗೊಳ್ಳಲಿದೆ.

ಮಾರ್ಚ್ 28ರಂದು ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಸಂಸ್ಕೃತ, ಉರ್ದು ಭಾಷೆಗಳ ಪರೀಕ್ಷೆ ನಡೆಯಲಿದೆ. ಮಾರ್ಚ್ 30ರಂದು ದ್ವಿತೀಯ ಭಾಷೆಯಾದ ಇಂಗ್ಲಿಷ್ ಪರೀಕ್ಷೆ. ಏಪ್ರಿಲ್ 1ರಂದು ಅರ್ಥಶಾಸ್ತ್ರ, ಎಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 6ರಂದು ಸಮಾಜ-ವಿಜ್ಞಾನ, ಏಪ್ರಿಲ್ ಎಂಟರಂದು ತೃತಿಯ ಭಾಷೆಯಾದ ಹಿಂದಿ, ಅರೇಬಿಕ್, ಮತ್ತು ಪರ್ಷಿಯನ್, ಕೊಂಕಣಿ, ತುಳು ಭಾಷೆಯ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 11ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಅಥವಾ ಹಿಂದುಸ್ತಾನಿ ಸಂಗೀತ ಪರೀಕ್ಷೆಗಳು ನಡೆಯಲಿವೆ ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...