Monday, August 10, 2026
Monday, August 10, 2026

ಬಲವಂತ ಭೂಸ್ವಾಧೀನ, ಬೀಜಕೃಷಿ ಕಾಯಿದೆ ವಿರುದ್ಧ ಹಾಗೂ ಕನಿಷ್ಠ ಕೂಲಿ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಶಿವಮೊಗ್ಗದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ರಸ್ತೆ ಸಂಚಾರ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘ, ಬಿಸಿ ಊಟ ನೌಕರರ ಸಂಘ, ಕರ್ನಾಟಕ ಜನಶಕ್ತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ “ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ” ಎಂಬ ಘೋಷಣೆಗಳನ್ನು ಕೂಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಲವಂತದ ಭೂಸ್ವಾಧೀನ ಕೈಬಿಡಬೇಕು, ಕನಿಷ್ಠ ಕೂಲಿ ದರವನ್ನು ಪರಿಷ್ಕರಿಸಬೇಕು, ಬೀಜ ಕಾಯ್ದೆ ಹಾಗೂ ಕೃಷಿ ಮಾರುಕಟ್ಟೆ ಸಂಹಿತೆಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಶಿವಪ್ಪ ನಾಯಕ ವೃತ್ತದ ಸುತ್ತಮುತ್ತ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಸ್ತೆ ತಡೆ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...