Monday, August 10, 2026
Monday, August 10, 2026

ಕನಿಷ್ಠವೇತನ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Date:

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾವಿರಾರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೃಹತ್ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡಲಾಗುತ್ತಿರುವ ‘ಗೌರವಧನ’ ಎಂಬ ಹಣೆಪಟ್ಟಿಯನ್ನು ತಕ್ಷಣವೇ ತೆಗೆದುಹಾಕಿ, ಕನಿಷ್ಠ ವೇತನ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 26 ಸಾವಿರ ರೂಪಾಯಿ ಹಾಗೂ ಸಹಾಯಕಿಯರಿಗೆ 20 ಸಾವಿರ ರೂಪಾಯಿ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಇದರ ಜೊತೆಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳನ್ನು ಹೊರತುಪಡಿಸಿ, ಇತರ ಯಾವುದೇ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡಬಾರದು ಎಂದು ಒತ್ತಾಯಿಸಿದರು.

“ಬಿಟ್ಟಿ ಕೆಲಸ ನಮಗೆ ಬೇಡವೇ ಬೇಡ” ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 2 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...