ಯುಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನಮ್ಮ ರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ನವದೆಹಲಿಯಲ್ಲಿ ₹80 ಕೋಟಿ ವೆಚ್ಚದಲ್ಲಿ ನೂತನ ‘ಕರ್ನಾಟಕ ಭವನ – 4’ ಅನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ರಾಷ್ಟ್ರ ರಾಜಧಾನಿಗೆ ತೆರಳುವ ನಮ್ಮ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ, ಅಲ್ಲಿಯೂ ಅವರಿಗೆ ಸಕಲ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಶಿಕ್ಷಣ ಮತ್ತು ಉದ್ಯೋಗದ ಹಾದಿಯಲ್ಲಿ ಯುವಜನತೆಗೆ ಬೆಂಬಲವಾಗಿ ನಿಲ್ಲಲು ಸರ್ಕಾರ ಸದಾ ಬದ್ಧವಾಗಿದೆ.
