ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಶರಾವತಿ ನದಿಯ ಹಿನ್ನೀರು ಪ್ರದೇಶದಲ್ಲಿರುವ ಚೌಡೇಶ್ವರಿ ದೇವಾಲಯಕ್ಕೆ ಬೆಳಗ್ಗೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸಿ, ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿತ್ತು. ವಿದ್ಯುತ್ ಅಲಂಕಾರದಿಂದ ದೇಗುಲದ ಆವರಣ ಕಂಗೊಳಿಸುತ್ತಿದ್ದು, ಭಕ್ತರನ್ನು ಆಕರ್ಷಿಸಿತು.
ರಾತ್ರಿ ದೇವಸ್ಥಾನದ ಆವರಣದಲ್ಲಿ ಸಿಡಿಮದ್ದು ಪ್ರದರ್ಶನ ಆಯೋಜಿಸಲಾಗಿತ್ತು. ಬಣ್ಣಬಣ್ಣದ ಸಿಡಿಮದ್ದುಗಳ ಪ್ರದರ್ಶನ ಭಕ್ತರ ಗಮನ ಸೆಳೆಯಿತು.
ಅಮಾವಾಸ್ಯೆಯ ವಿಶೇಷ ದಿನದಂದು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ದೇವಸ್ಥಾನದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು
