ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ.15 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ಕ್ಷೇತ್ರದ ಶಾಸಕರಾದ ಬಿ.ಕೆ.ಸಂಗಮೇಶ್ವರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಮಹಾನಗರಪಾಲಿಕೆ ಆಯುಕ್ತರು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಮಾಧ್ಯಮ ಮಿತ್ರರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವರು.
ಅಂದು ಸಂಜೆ 5.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ಶಿವಮೊಗ್ಗ ನಗರದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಆಗಸ್ಟ್ 15. ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ವೈಭವದ ಸ್ವಾತಂತ್ರ್ಯೋತ್ಸವ ಆಯೋಜನೆ
Date:
