Thursday, August 13, 2026
Thursday, August 13, 2026

ಆಗಸ್ಟ್ 20. ನೇತಾರ ಡಿ.ದೇವರಾಜ ಅರಸು ಜಯಂತಿ: ಅದ್ಧೂರಿ ಆಚರಣೆ ಸಿದ್ಧತೆಗೆ ಜಿಲ್ಲಾಡಳಿತದಿಂದ ಪೂರ್ವಸಭೆ

Date:

ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ ಸಮಾರಂಭವನ್ನು ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲು ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರುಸುರವರ ಜನ್ಮ ದಿನಾಚರಣೆ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಲು ಸೂಚಿಸಿದ ಅವರು ಆ.20 ರಂದು ಕುವೆಂಪು ರಂಗಮAದಿರದಲ್ಲಿ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ನಗರದ ಸೈನ್ಸ್ ಮೈದಾನದಿಂದ ರಂಗಮAದಿರದವರೆಗೆ ಅರಸುರವರ ಭಾವಚಿತ್ರದೊಂದಿಗೆ ಸಾಂಸ್ಕೃತಿಕ ತಂಡಗಳೊಟ್ಟಿಗೆ ಮೆರವಣಿಗೆ ಸಾಗಿ ಬರಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ತೋಟಗಾರಿಕೆ ಮತ್ತು ಪಾಲಿಕೆಯವರು ವೇದಿಕೆ ಅಲಂಕಾರ ಕೈಗೊಳ್ಳುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದ ಅವರು ಮುಖಂಡರು ಉಲ್ಲೇಖಿಸಿದ ಉಪನ್ಯಾಸಕರಿಂದ ಅರಸುವರವ ಕುರಿತು ಉಪನ್ಯಾಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.
ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳ ಮುಖಂಡರು ಮಾತನಾಡಿ, ಎಲ್ಲ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಳು, ಸಂಘಟನೆಗಳ ಸಹಯೋಗ ಮತ್ತು ಸಮನ್ವಯತೆಯಿಂದ ಅರಸುರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಸುರವರ ಕುರಿತಾದ ಕಿರು ಪುಸ್ತಕಗಳನ್ನು ವಿತರಿಸುವಂತೆ ಮನವಿ ಮಾಡಿದರು.
ಡಿ ದೇವರಾಜ ಅರಸು ಭವನದ ನಿರ್ಮಾಣ ವಿಳಂಬವಾಗುತ್ತಿದೆ. ಇದು ಪೂರ್ಣಗೊಳ್ಳಲು ಅಗತ್ಯವಾದ ಅನುದಾನ ತಂದು ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಬೇಕೆAದು ಅವರು ಕೋರಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಡಿ.ದೇವರಾಜ ಅರಸುರವರ ಭವನ ನಿರ್ಮಾಣದಲ್ಲಿ ಈಗಾಗಲೇ ವಿಳಂಬ ಆಗಿದೆ. ಇನ್ನುಳಿದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಹಾಗೂ ಪ್ರತಿ ವರ್ಷ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಸುರವರ ವಿವಿಧ ಕ್ಷೇತ್ರಗಳ ಕೊಡುಗೆಗಳ ಕುರಿತಾದ ವಿಷಯಗಳನ್ನಿಟ್ಟು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆಯನ್ನು ಸ್ಪರ್ಧೆಯನ್ನು ಆಯೋಜಿಸಿ ಅವರ ಸಾಧನೆಗಳ ಕುರಿತು ಮನದಟ್ಟು ಮಾಡುವಂತೆ ತಿಳಿಸಿದ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ತಿಳಿಸಿದರು.
ಹಿಂದುಳಿದ ವರ್ಗಗಳ ವಸತಿನಿಲಯದ ಅತಿ ಹೆಚ್ಚು ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಜಯಂತಿಯAದು ಸನ್ಮಾನಿಸಿ ಅಭಿನಂದಿಸಲಾಗುವುದು ಹಾಗೂ ಅರಸುರವರ ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಂದು ಬಹುಮಾನ ವಿತರಿಸಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನ್, ದಲಿತ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...