B.Y. Raghavendra ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಬೃಹತ್ ಹಣ ದುರುಪಯೋಗ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ – ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಅನಿರ್ದಿಷ್ಟಾವಧಿ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.
ಸಾಮಾಜಿಕ ನ್ಯಾಯಕ್ಕೆ ಮಾರಕವಾಗಿರುವ ಮತ್ತು ಸಾರ್ವಜನಿಕರ ಹಣವನ್ನು ಕೊಳ್ಳೆ ಹೊಡೆದಿರುವ ಭ್ರಷ್ಟರಿಗೆ ರಾಜಕೀಯ ರಕ್ಷಣೆ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ರಾಘವೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನ ಟೀಕಿಸಿದರು .
ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆಯಾಗಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವವರೆಗೆ ಮತ್ತು ಭ್ರಷ್ಟ ಸಚಿವರ ವಜಾ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿ.ವೈ.ರಾಘವೇಂದ್ರ ಘೋಷಿಸಿದರು.
ಈ ಧರಣಿ ಸತ್ಯಾಗ್ರಹದಲ್ಲಿ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
