ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಎಜಾಕ್ಸ್ ಸಿ.ಎಸ್.ಆರ್. ನಿಧಿಯಡಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆ. 22ರ ಶನಿವಾರ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸೈನ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ನೂತನ ಕಟ್ಟಡ ಶಂಕುಸ್ಥಾಪನೆ ನೆರವೇರಿಸುವರು.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ಕ್ಷೇತ್ರದ ಶಾಸಕರಾದ ಬಿ.ಕೆ. ಸಂಗಮೇಶ್ವರ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಗೌರವ ಉಪಸ್ಥಿತಿ ಇರಲಿದೆ.
ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ವಿವಿಧ ನಿಗಮ,ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು, ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ಕೂಲ್/ಕಾಲೇಜುಗಳ ಪ್ರಾಂಶುಪಾಲರುಗಳು,ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
