Friday, August 21, 2026
Friday, August 21, 2026

ಭಾರತ್ ಜೋಡೋ ಯುವಸಂಘ ಸದಸ್ಯತ್ವ: ಶಿರಾಳಕೊಪ್ಪ ಪುರಸಭೆ ಪ್ರಕಟಣೆ

Date:

ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ (ಬಿಜೆವೈಎಸ್) ಸದಸ್ಯತ್ವಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿರಾಳಕೊಪ್ಪ ಪುರಸಭೆಯ ಜಂಟಿ ಸಹಯೋಗದಲ್ಲಿ ಈ ಸಂಘಗಳನ್ನು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಥಾಪಿಸಲಾಗಿದೆ.

ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆಯಾದ ಸದಸ್ಯರು ಕ್ರೀಡೆ, ಫಿಟ್‌ನೆಸ್, ಯುವ ಸಬಲೀಕರಣ, ಕೌಶಲ್ಯಾಭಿವೃದ್ಧಿ, ಸಮುದಾಯ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ, ಯೋಗಕ್ಷೇಮ ಹಾಗೂ ಸಾಂಸ್ಕೃತಿಕ-ಸಾಮಾಜಿಕ ಸಾಮರಸ್ಯ ಕಾಪಾಡುವ ವಿವಿಧ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ವಿವರ:
ಆಸಕ್ತರು ಅಧಿಕೃತ ಪೋರ್ಟಲ್ bjys.karnataka.gov.in ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ವೆಬ್‌ಸೈಟ್ www.shiralakoppatown.mrc.gov.in ಅಥವಾ ಪುರಸಭಾ ಕಚೇರಿಯನ್ನು ಸಂಪರ್ಕಿಸುವಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...