Friday, August 21, 2026
Friday, August 21, 2026

ಕಾಮನ್ ವೆಲ್ತ್ ಕ್ರೀಡೆಯಲ್ಲಿ ಕೀರ್ತಿತಂದ ಕೆ.ಎಸ್.ಶಿಲ್ಪಾ ಗೆ ಮುಖ್ಯಮಂತ್ರಿಗಳಿಂದ ಸನ್ಮಾನ

Date:

ಗ್ಲಾಸ್ಗೊದಲ್ಲಿ ಜರುಗಿದ 2026ರ ಪ್ಯಾರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದು, ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ನಮ್ಮ ಹೆಮ್ಮೆಯ ಕ್ರೀಡಾಪಟು ಕುಮಾರಿ ಕೆ.ಎಸ್.‌ ಶಿಲ್ಪಾ ಅವರನ್ನು ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕುಮಾರಿ ಕೆ.ಎಸ್.‌ ಶಿಲ್ಪಾ ಅವರಿಗೆ ಕರ್ನಾಟಕ ಸರ್ಕಾರದಿಂದ 20 ಲಕ್ಷ ರೂ. ನಗದು ಬಹುಮಾನದ ಚೆಕ್‌ ಹಸ್ತಾಂತರಿಸಿದರು. ಇದರೊಂದಿಗೆ ಸರ್ಕಾರ ಅವರಿಗೆ ‘ಗ್ರೂಪ್ ಬಿ’ ಸರ್ಕಾರಿ ನೌಕರಿ ಘೋಷಿಸಿದೆ. ಶಿಲ್ಪಾ ಅವರ ಈ ಸಾಧನೆ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ. ಇವರ ಮುಂದಿನ ಗುರಿಗಳಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸೋಣ.

ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಮತ್ತು ಯುವಜನ ಸೇವೆ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ವಿಧಾನ ಪರಿಷತ್‌ ಸದಸ್ಯರಾದ ಡಾ. ಕೆ. ಗೋವಿಂದರಾಜ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...