Breaking News ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯ ರಸ್ತೆಯಲ್ಲಿರುವ ‘ರೇಂಜ್ 1’ ಬಟ್ಟೆ ಅಂಗಡಿಯಲ್ಲಿ ಬೆಳಗಿನ ಜಾವ ಸುಮಾರು 5:30ಕ್ಕೆ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿವೆ.
ರಹೀಮ್ ಎಂಬುವವರಿಗೆ ಸೇರಿದ ಈ ಬಟ್ಟೆ ಅಂಗಡಿಯಲ್ಲಿ ಈದ್ ಮಿಲಾದ್ ಹಬ್ಬಕ್ಕಾಗಿ ತರಿಸಲಾಗಿದ್ದ ಹೊಸ ಬಟ್ಟೆಗಳ ಸ್ಟಾಕ್ ಕೂಡ ಸಂಪೂರ್ಣವಾಗಿ ನಾಶವಾಗಿದೆ. ಘಟನೆಯಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
Breaking News ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಪರಿಶೀಲನೆ ನಡೆಯುತ್ತಿದೆ.
