B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026’ಕ್ಕೆ ಭಾಜನರಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರತ್ನಕುಮಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಶಿವಮೊಗ್ಗ ಲೋಕಸಭಾಕ್ಷೇತ್ರದ ಸದಸ್ಯರಾದ ಬಿ.ವೈ.ರಾಘವೇಂದ್ರ
ಶ್ರೇಷ್ಠ ಶಿಕ್ಷಕಿಯಾಗಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ ಶ್ರೀಮತಿ ರತ್ನಕುಮಾರಿ ಅವರಿಗೆ ಹಾರ್ದಿಕವಾಗಿ ಅಭಿನಂದಿಸಿ ತಮ್ಮಕ್ಷೇತ್ರದ ಹೆಮ್ಮೆಯನ್ನ ಹಂಚಿಕೊಂಡಿದ್ದಾರೆ.
ದೇಶಾದ್ಯಂತ ಆಯ್ಕೆಯಾದ 48 ವಿಶಿಷ್ಟ ಶಿಕ್ಷಕರಲ್ಲಿ ನಮ್ಮ ಕ್ಷೇತ್ರದ ಗ್ರಾಮೀಣ ಶಾಲೆಯ ಶಿಕ್ಷಕಿಯೊಬ್ಬರು ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಹಾಗೂ ಸಂತಸದ ಸಂಗತಿ.
B.Y. Raghavendra ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗ್ರಾಮೀಣ ಶೈಕ್ಷಣಿಕ ಕ್ಷೇತ್ರಕ್ಕೆ ಸಿಗುತ್ತಿರುವ ಪ್ರೋತ್ಸಾಹಕ್ಕೆ ಈ ಪ್ರಶಸ್ತಿಯೇ ಸಾಕ್ಷಿ. ಮುಂಬರುವ ಶಿಕ್ಷಕರ ದಿನಾಚರಣೆಯಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಮಾನ್ಯ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಹಸ್ತದಿಂದ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನವಾಗಲಿದೆ.
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ರೂಪಿಸುವಲ್ಲಿ ಹಾಗೂ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ನೀವು ಸಲ್ಲಿಸಿರುವ ಅಪಾರ ಸೇವೆ, ಕಟಿಬದ್ಧತೆ ಮತ್ತು ಸಮರ್ಪಣೆಗೆ ದೊರೆತ ಅರ್ಹ ಗೌರವ ಇದಾಗಿದೆ.
ನಿಮ್ಮ ಈ ಸಾಧನೆ ಶಿವಮೊಗ್ಗ ಜಿಲ್ಲೆ ಹಾಗೂ ಇಡೀ ಕರ್ನಾಟಕವೇ ಹೆಮ್ಮೆಪಡುವಂತೆ ಮಾಡಿದೆ. ನಿಮ್ಮ ಶೈಕ್ಷಣಿಕ ಸೇವೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಅನೇಕ ಮಕ್ಕಳ ಬದುಕಿಗೆ ಬೆಳಕಾಗಲಿ ಎಂದು ಹಾರೈಸುತ್ತೇನೆ.
ಶ್ರೀಮತಿ ರತ್ನಕುಮಾರಿ ಅವರಿಗೆ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು! ಎಂದು ಸಂದ ಬಿ.ವೈ.ರಾಘವೇಂದ್ರ ತಮ್ಮ ಅಭಿನಂದನೆ ಅರ್ಪಿಸಿದ್ದಾರೆ.
