Sunday, August 23, 2026
Sunday, August 23, 2026

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

Date:

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಅಮೃತ ದೊರಕಬೇಕು ಎಂಬುದೇ ನಮ್ಮ ಸರ್ಕಾರದ ಅಚಲ ಸಂಕಲ್ಪ ಎಂದು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾವು ಕಟ್ಟುತ್ತಿರುವುದು ಕೇವಲ ಇಟ್ಟಿಗೆ-ಸಿಮೆಂಟ್‌ನ ಗೋಡೆಗಳನ್ನಲ್ಲ, ನಾಳಿನ ದೃಢ ಕರ್ನಾಟಕದ ಬುನಾದಿಯನ್ನು! ಇದೇ ನಿಟ್ಟಿನಲ್ಲಿ, ಬರೋಬ್ಬರಿ ₹2,500 ಕೋಟಿ ವೆಚ್ಚದಲ್ಲಿ 500 ಕೆಪಿಎಸ್ ಶಾಲೆಗಳನ್ನು ಸಮಗ್ರವಾಗಿ ಉನ್ನತೀಕರಿಸುವ ‘ಶಿಕ್ಷಣ ಕ್ರಾಂತಿ 2030’ ಯೋಜನೆಗೆ ಹೆಜ್ಜೆ ಇಟ್ಟಿದ್ದೇವೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಏಷಿಯನ್ ಡೆವಲೆಪ್ಮೆಂಟ್
ಬ್ಯಾಂಕ್ ನ ಆರ್ಥಿಕ ನೆರವು ಪಡೆದ ಉನ್ನತ ಸಭೆಯಲ್ಲಿ ಭಾಗವಹಿಸಿದ ನಂತರ ಈ ವಿಷಯ ತಿಳಿಸಿದರು.

D.K. Shivakumar ಎಲ್‌ಕೆಜಿಯ ಅಕ್ಷರಾಭ್ಯಾಸದಿಂದ 12ನೇ ತರಗತಿಯವರೆಗೆ, ಆಧುನಿಕ AI ತಂತ್ರಜ್ಞಾನದಿಂದ ಹಿಡಿದು ಬದುಕನ್ನು ಬೆಳಗುವ ಕೌಶಲ್ಯಾಭಿವೃದ್ಧಿಯವರೆಗೆ, ಎಲ್ಲವೂ ಒಂದೇ ಸೂರಿನಡಿ, ಸಂಪೂರ್ಣ ಉಚಿತವಾಗಿ ಲಭ್ಯವಾಗಲಿದೆ.

ಇದು ಕೇವಲ ಶಾಲೆಗಳ ಅಭಿವೃದ್ಧಿಯಲ್ಲ, ಮುಂದಿನ 50 ವರ್ಷಗಳ ಕಾಲ ಕನ್ನಡಿಗರನ್ನು ಜಗತ್ತಿನೆದುರು ತಲೆ ಎತ್ತಿ ನಿಲ್ಲುವಂತೆ ಮಾಡುವ ದಿವ್ಯ ಯಜ್ಞ.

ಜ್ಞಾನದ ಹಾದಿಯಲ್ಲಿ ಒಟ್ಟಾಗಿ ಸಾಗೋಣ,
ಭವ್ಯ ಭವಿಷ್ಯದತ್ತ ಹೆಜ್ಜೆ ಹಾಕುತ್ತಾ, ಬಲಿಷ್ಠ ಕರ್ನಾಟಕವನ್ನು ಕಟ್ಟೋಣ! ಎಂದು ಡಿ.ಕೆ.ಶಿವಕುಮಾರ್ ಕರೆಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...