Monday, August 24, 2026
Monday, August 24, 2026

‘ಚಲುವೆ ಚಿತ್ರಾವತಿ ‘ ಯಶಸ್ವಿ ಯಕ್ಷಗಾನ ಪ್ರದರ್ಶನ.ಶಿವಮೊಗ್ಗದಲ್ಲಿ ಆಧುನಿಕ ಸುಸಜ್ಜಿತ ರಂಗಮಂದಿರ ನಿರ್ಮಾಣ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Date:

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷೆ ಜೆಸಿ ವಿಜಯಲಕ್ಷ್ಮಿ ಯು. ಕದಂಬ ಅವರ ನೇತೃತ್ವದಲ್ಲಿ, ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಬಾಲರಾಜ್, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಂಘಟಿತ ಪ್ರಯತ್ನದಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ಸಿನ ಮೆಟ್ಟಿಲೇರಿತು.

ಕಾರ್ಯಕ್ರಮದ ಸಭಾ ಭಾಗದಲ್ಲಿ ಮಾತನಾಡಿದ ಸಂಸ್ಥೆಯ ಪೂರ್ವಾಧ್ಯಕ್ಷ ಉದಯ ಕದಂಬ ಅವರು, ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಲೆನಾಡಿನ ಕಲಾಭಿಮಾನಿಗಳು, ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಹವಾ ನಿಯಂತ್ರಿತ ವ್ಯವಸ್ಥೆ (ಎಸಿ) ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಭವ್ಯ ರಂಗಮಂದಿರದ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೆಸಿಐ ವಲಯ-24ರ ವಲಯಾಧ್ಯಕ್ಷ ಮಧುಸೂದನ ನಾವಡ ಅವರು, ಯುವಜನರಲ್ಲಿ ನಾಯಕತ್ವ, ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ಪಾತ್ರ ಶ್ಲಾಘನೀಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ದೇವರಾಜ್ ಟಿ.ವಿ. ಅವರನ್ನು ಸಮಾಜಮುಖಿ ಸೇವೆ ಹಾಗೂ ಕರ್ತವ್ಯನಿಷ್ಠೆಗಾಗಿ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ವಲಯ ಉಪಾಧ್ಯಕ್ಷ ಗಣೇಶ್ ಪೈ, ವೀರಶೈವ ಸಮಾಜದ ಅಧ್ಯಕ್ಷ ಜ್ಯೋತಿಪ್ರಕಾಶ್, ಕೆ.ವಿ. ವಸಂತ್ ಕುಮಾರ್, ನ್ಯಾಯಾಂಗ ಕ್ಷೇತ್ರದ ಗಣ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ‘ಕಾಟನ್ ಜಾವಾ ವರ್ಲ್ಡ್’ ಸಂಸ್ಥೆಯ ಕಾಟನ್ ಜಗದೀಶ್ ಅವರು ಅಚ್ಚುಕಟ್ಟಾಗಿ ನಿರ್ವಹಿಸಿ ಸಭಿಕರ ಮೆಚ್ಚುಗೆ ಗಳಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಯಕ್ಷಗಾನ ಅಭಿಮಾನಿಗಳು ಮತ್ತು ಕಲಾಪೋಷಕರು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ಕಲೆ, ಸಂಸ್ಕೃತಿ ಮತ್ತು ಯುವಜನರ ವ್ಯಕ್ತಿತ್ವ ವಿಕಸನಕ್ಕೆ ಬದ್ಧವಾಗಿರುವ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಈ ಪ್ರಯತ್ನವು ಶಿವಮೊಗ್ಗದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮತ್ತೊಂದು ಸ್ಮರಣೀಯ ಅಧ್ಯಾಯವಾಗಿ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...