ಆಗಸ್ಟ್ 26ರಂದು ನಡೆಯಲಿರುವ ಈದ್ ಮಿಲಾದ್ ಆಚರಣೆಗೆ ಶಿವಮೊಗ್ಗ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳನ್ನು ಅಲಂಕರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಟಿಪ್ಪು ನಗರ, ಸೂಳೇಬೈಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ. ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ, ಬ್ಯಾನರ್‌ಗಳು ಹಾಗೂ ವಿವಿಧ ಅಲಂಕಾರಗಳನ್ನು ಅಳವಡಿಸಲಾಗುತ್ತಿದೆ.
ಈದ್ ಮಿಲಾದ್ ಆಚರಣೆಯನ್ನು ಸಂಭ್ರಮದಿಂದ ಆಚರಿಸಲು ಮುಸ್ಲಿಂ ಸಮುದಾಯದವರು ಸಿದ್ಧತೆ ನಡೆಸಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
