ಆ.20 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಎದುರುಗಡೆ ಬ್ರೈಟ್ ಹೊಟೇಲ್ ಮುಂದಿನ ಫುಟ್‌ಪಾತ್ ಮೇಲೆ ಸುಸ್ತಾಗಿ ಮಲಗಿದ್ದ 55 ರಿಂದ 60 ವರ್ಷದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿರುತ್ತಾರೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಮೃತ ವ್ಯಕ್ತಿಯ ಹೆಸರು, ವಿಳಾಸ ಅಥವಾ ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿಯು 5.7ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ನೀಳವಾದ ಮೂಗಿನ ಮೇಲೆ ಹಾಗೂ ಎದೆಯ ಮಧ್ಯಭಾಗದಲ್ಲಿ ಕಪ್ಪು ಮಚ್ಚೆಯ ಗುರುತು ಇದೆ. ಮೈಮೇಲೆ ಕಪ್ಪು ಬಣ್ಣದ ಜರ್ಕಿನ್, ನೀಲಿ ಬಣ್ಣದ ನೈಟ್ ಪ್ಯಾಂಟ್ ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಪತ್ತೆಯಾದಲ್ಲಿ ಶಿವಮೊಗ್ಗ ದೊಡ್ಡ ಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/9902996413 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ಮನವಿ
Date:
