Tuesday, October 20, 2026
Tuesday, October 20, 2026

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Date:

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ ಭಾಷಣ, ನಾಯಕತ್ವ ಕೌಶಲ್ಯ, ತಂಡದ ಕಾರ್ಯಪದ್ಧತಿ, ಸಮಾಜದ ಸಮಸ್ಯೆಗಳ ಪರಿಹಾರ, ಶಿಕ್ಷಣ, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದಂತಹ ಕ್ಷೇತ್ರಗಳಲ್ಲಿ ಸೇವಾ ಮನೋಭಾವ ಬೆಳೆಸುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆಯಾಗಿವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಸುಮತಿ ಜಿ. ಕುಮಾರಸ್ವಾಮಿ ಹೇಳಿದರು.

ಅವರು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಗಾನೆ, ಶಿವಮೊಗ್ಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂಟರಾಕ್ಟ್ ಕ್ಲಬ್‌ಗಳು ಯುವ ಮನಸ್ಸುಗಳನ್ನು ಅರ್ಥಪೂರ್ಣ ಸೇವಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ತಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರುವಂತೆ ಸಬಲೀಕರಣಗೊಳಿಸುತ್ತವೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣಗಳು ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅವರು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಅಧ್ಯಕ್ಷ ಶೇಷಗಿರಿ ಡಿ.ಕೆ. ಮಾತನಾಡಿ, ಇಂಟರಾಕ್ಟ್ ಕ್ಲಬ್‌ಗಳು ಸಾಮಾಜಿಕ ಸಂಪರ್ಕ, ಸಾಕ್ಷರತೆ ಉತ್ತೇಜನ, ನೈರ್ಮಲ್ಯ ಜಾಗೃತಿ, ವೃತ್ತಿ ಸಮಾಲೋಚನೆ, ಯುವ ವಿನಿಮಯ ಕಾರ್ಯಕ್ರಮ, ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ ಹಾಗೂ ಮರ ನೆಡುವ ಅಭಿಯಾನಗಳಂತಹ ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸುತ್ತವೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಉಪಾಧ್ಯಕ್ಷ ಜಿ. ವಿಜಯ್ ಕುಮಾರ್ ಮಾತನಾಡಿ, 12 ರಿಂದ 18 ವರ್ಷದ ವಿದ್ಯಾರ್ಥಿಗಳಿಗಾಗಿ ರೂಪುಗೊಂಡಿರುವ ಇಂಟರಾಕ್ಟ್ ಕ್ಲಬ್ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಯುವ ಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಮಧ್ಯಮ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಸೇವಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ನೆರವಾಗುವ ಅವಕಾಶವನ್ನು ಈ ಕ್ಲಬ್ ಒದಗಿಸುತ್ತದೆ ಎಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾದ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಕಾರ್ಯದರ್ಶಿ ಆರ್. ಮನೋಹರ ಮಾತನಾಡಿ, ಕ್ಲಬ್‌ನ ಅಧ್ಯಕ್ಷರು ಸಂಘಟನೆಯನ್ನು ಮುನ್ನಡೆಸುತ್ತಾರೆ. ಉಪಾಧ್ಯಕ್ಷರು ಅಧ್ಯಕ್ಷರಿಗೆ ಸಹಕಾರ ನೀಡುತ್ತಾರೆ. ಕಾರ್ಯದರ್ಶಿಗಳು ಸಭೆಗಳ ದಾಖಲೆ ಹಾಗೂ ಅಧಿಕೃತ ಸಂವಹನಗಳನ್ನು ನಿರ್ವಹಿಸುತ್ತಾರೆ. ಖಜಾಂಚಿಗಳು ಕ್ಲಬ್‌ನ ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಕ್ಲಬ್‌ನ ಜವಾಬ್ದಾರಿಗಳ ಕುರಿತು ವಿವರಿಸಿದರು.

Rotary Club Shimoga ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಇತರ ಶಾಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್-ಕನ್ನಡ ನಿಘಂಟು, ಪೆನ್, ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ಜೊತೆಗೆ ಸ್ಮಾರ್ಟ್ ಟ್ಯಾಬ್ ಖರೀದಿಗಾಗಿ ಧನಸಹಾಯವನ್ನು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಗಾನೆ ಶಾಲೆಯ ವಿಜ್ಞಾನ ಶಿಕ್ಷಕರಾದ ಕಿರಣ್, ಶಿಕ್ಷಕಿಯರಾದ ಲಕ್ಷ್ಮೀ ಹಾಗೂ ಛಾಯಾ, ಎಸ್‌ಡಿಎಂಸಿ ಸದಸ್ಯರಾದ ವಿಶಾಲಾಕ್ಷಿ ಮತ್ತು ರೂಪ, ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ, ಉಪಾಧ್ಯಕ್ಷೆ, ಕಾರ್ಯದರ್ಶಿ ಹಾಗೂ ಸದಸ್ಯರು, ಶಾಲಾ ಸಿಬ್ಬಂದಿ ಮತ್ತು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...