Wednesday, August 26, 2026
Wednesday, August 26, 2026

ಬಾಳಗಾರು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನಾ ಮಹೋತ್ಸವ ಆಯೋಜನೆ

Date:

ಶಿವಮೊಗ್ಗ ತಾಲ್ಲೂಕಿನ ಬಾಳಗಾರು ಗ್ರಾಮದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 29, 30 ಹಾಗೂ 31, 2026 ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಶ್ರಾವಣ ಬಹುಳ ಪಾಡ್ಯ, ಬಿದಿಗೆ ಹಾಗೂ ತದಿಗೆ ದಿನಗಳ ಅಂಗವಾಗಿ ಮೂರು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ವಿಧಿವಿಧಾನಗಳು, ಭಜನೆ, ಪ್ರವಚನ ಹಾಗೂ ಮಹಾಪೂಜೆಗಳು ನಡೆಯಲಿವೆ. ಆಗಸ್ಟ್ 30 ರಂದು ಬೆಳಿಗ್ಗೆ 6.00 ಗಂಟೆಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದ್ದು, ಆಗಸ್ಟ್ 31 ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಚಕ್ರವರ್ತಿ ಆರಾಧನಾ ಮಹೋತ್ಸವ ನೆರವೇರಲಿದೆ.

ಮಹೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ, ವಿಶೇಷ ಸೇವೆಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಯರ ಕೃಪೆಗೆ ಪಾತ್ರರಾಗಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಠದ ಆಡಳಿತ ಮಂಡಳಿ ಮನವಿ ಮಾಡಿದೆ.

ಗುರುರಾಜ ಸೇವಾ ಟ್ರಸ್ಟ್ (ರಿ.), ಬಾಳಗಾರು ವತಿಯಿಂದ ಈ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಭಕ್ತರು ತನು, ಮನ ಹಾಗೂ ಧನ ಸಹಾಯದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಅಳಗಂಭಟ್ ಗುರುರಾಜ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 94483 19976 ಹಾಗೂ 63610 39586 ಅನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...