ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪಿಸಲು ಹಾಗೂ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮವಹಿಸಲು ಶಿವಮೊಗ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಧು ಹೆಚ್.ಎಂ ನೀಡಿದರು.
ಮಂಗಳವಾರ ತಾಲ್ಲೂಕು ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ, ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆ: ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಿಯಮಿತವಾಗಿ ಮತ್ತು ಸಮರ್ಪಕವಾಗಿ ಹಣ ಜಮಾ ಮಾಡಲು ಸೂಚಿಸಿದರು. ಜೊತೆಗೆ, ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ರದ್ದುಪಡಿಸಲು ತಿಳಿಸಿದರು.
ಬಿಪಿಎಲ್ / ಎಪಿಎಲ್ ಕಾರ್ಡ್ ಪರಿಶೀಲನೆ: ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗೆ ಪರಿವರ್ತನೆಯಾಗಿರುವ ಬಡ ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸಿ, ಅರ್ಹ ಬಡವರಿಗೆ ನ್ಯಾಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹಜ್ಯೋತಿ ಯೋಜನೆ: ಯೋಜನೆಯಡಿ ಶೇ. 91 ರಷ್ಟು ಪರಿಶೀಲನಾ ಪ್ರಗತಿಯನ್ನು ಸಾಧಿಸಲಾಗಿದ್ದು, ಹೊಸದಾಗಿ ನೋಂದಾಯಿಸಿಕೊಂಡ ಫಲಾನುಭವಿಗಳಿಗೂ ಯೋಜನೆಯ ಲಾಭ ತಲುಪಿಸಲು ತಿಳಿಸಿದರು.
ಶಕ್ತಿ ಯೋಜನೆ : ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿ.ಮೀ ಪ್ರಯಾಣ ಮಿತಿಯಲ್ಲಿ ಸಂಚರಿಸಲು ಬಸ್‌ಪಾಸ್ ವಿತರಿಸಲಾಗಿದೆ. ಮುಂಬರುವ ವಾರ್ಷಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಬಸ್ ಸಂಚಾರ ನಡೆಸಲು ಸೂಚಿಸಲಾಯಿತು. ಮಹಿಳೆಯರು ಮತ್ತು ವಿದ್ಯಾರ್ಥಿಗಳು ಹೆಚ್ಚಿರುವ ಗ್ರಾಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ನಿರ್ದೇಶಿಸಿದರು.
ಗ್ಯಾರಂಟಿ ಸಮಿತಿಗಳ ರಚನೆ: ಸರ್ಕಾರದ ಆದೇಶದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ 6 ಸದಸ್ಯರನ್ನೊಳಗೊಂಡ (ಎಸ್‌ಸಿ/ಎಸ್‌ಟಿ-1, ಅಲ್ಪಸಂಖ್ಯಾತರು-1, ಮಹಿಳಾ ಮೀಸಲು-2, ಇತರೆ ಹಿಂದುಳಿದ ವರ್ಗ-1, ಸಾಮಾನ್ಯ ವರ್ಗ-1) ಗ್ಯಾರಂಟಿ ಸಮಿತಿಗಳನ್ನು ತಕ್ಷಣವೇ ರಚಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್. ಶಿವಣ್ಣ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪರಮೇಶ್ ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸೂಕ್ತವಾಗಿ ತಲುಪಿಸಿ- ಹೆಚ್.ಎಂ.ಮಧು
Date:
