ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 28 ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಉದ್ಘಾಟನೆಯನ್ನು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು. ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸುವರು.
ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ವಿಶೇಷ ಉಪನ್ಯಾಸವನ್ನು ನೀಡುವರು.
ಆಗಸ್ಟ್ 28. ಶಿವಶರಣ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಜಿಲ್ಲಾಡಳಿತ ಪೂರ್ವ ಸಿದ್ಧತೆ
Date:
