Friday, August 28, 2026
Friday, August 28, 2026

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ2026-27 ನೇ ಸಾಲಿನ ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಪ್ರಥಮ ಪಿಯುಸಿ ಹಾಗೂ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಸಾಂದೀಪಿನಿ ಶಿಷ್ಯವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವಿದ್ಯಾರ್ಥಿಗಳಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ. 15000/- ಗಳನ್ನು ನೀಡಲಾಗುತ್ತಿದ್ದು, ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್‌ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ಅಡಿಯಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್, ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಎನ್‌ಪಿಸಿಐ ಅಡಿಯಲ್ಲಿ ಸೀಡ್ ಆಗಿರಬೇಕು.
ಅರ್ಹ ವಿದ್ಯಾರ್ಥಿಗಳು www.esbdb.karnataka.gov.in ಲಿಂಕ್ ಮೂಲಕ ದಿ: 31/12/2026 ರೊಳಗಾಗಿ ಅರ್ಜಿಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8029605888/ 8762249230 ಗಳನ್ನು ಸಂಪರ್ಕಿಸುವುದು ಹಾಗೂ ಇನ್ಸ್ಟ್ರಾ ಗ್ರಾಂ ಮತ್ತು ಫೇಸ್‌ಬುಕ್ ಮೂಲಕವೂ ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...