ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆನರಾ ಬ್ಯಾಂಕ್ (ಲೀಡ್ ಬ್ಯಾಂಕ್) ವತಿಯಿಂದ ಆಯೋಜಿಸಲಾಗಿದ್ದ ‘ಜಿಲ್ಲಾ ಸಲಹಾ ಸಮಿತಿ’ (DCC) ಹಾಗೂ ‘ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ’ (DLRC) ಸಭೆಯ ಅಧ್ಯಕ್ಷತೆಯನ್ನು ಸಂಸದ ಬಿ.ವೈ.ರಾಘವೇಂದ್ರ ವಹಿಸಿದ್ದರು.
ಸಭೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ನಮ್ಮ ಜಿಲ್ಲೆಯ ರೈತರು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು, ಯುವಜನತೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸಾಲ ಸೌಲಭ್ಯಗಳು ಸರಳವಾಗಿ ಮತ್ತು ಶೀಘ್ರವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಲು ಬ್ಯಾಂಕಿಂಗ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನ ಬಿ.ವೈ.ರಾಘವೇಂದ್ರ ನೀಡಿದರು..
ಆದ್ಯತಾ ವಲಯಗಳ ಸಬಲೀಕರಣ ಮತ್ತು ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲು ಬದ್ಧರಾಗಿದ್ದೇವೆ ಎಂದು ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆಯನ್ನು ನೀಡಿದರು.
