B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಶಿವಮೊಗ್ಗ ವಿಭಾಗ ಮಟ್ಟದ ಬಿಜೆಪಿ ಪ್ರಮುಖರ ವಿಶೇಷ ಸಭೆ ನಡೆಯಿತು.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಕಸ್ತೂರಿರಂಗನ್ ವರದಿ ಕರಡು ಜಾರಿ ಹಾಗೂ ಇದರಿಂದ ಮಲೆನಾಡು ಭಾಗದ ಜನರ ಮೇಲಾಗುವ ಪರಿಣಾಮಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಪಾಡುವುದು ಪಕ್ಷದ ಮೊದಲ ಆದ್ಯತೆಯಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಪರಿಸರ ರಕ್ಷಣೆ ಮತ್ತು ಜನರ ಕಲ್ಯಾಣ ಎರಡಕ್ಕೂ ಸಮತೋಲನದ ಶಾಶ್ವತ ಪರಿಹಾರ ಕಂಡುಕೊಳ್ಳಲು ಪಕ್ಷ ಬದ್ಧವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
B.Y. Raghavendra ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಆರಗ ಜ್ಞಾನೇಂದ್ರ, ಸಿ.ಟಿ. ರವಿ, ಆರ್.ಕೆ. ಸಿದ್ಧರಾಮಣ್ಣ, ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
