Sunday, August 30, 2026
Sunday, August 30, 2026

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Date:

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.
ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರನ್ನು ಇಂಪೌಂಡ್ ರಿಸರ್ವಿಯರ್ ಗಳಿಗೆ ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bhadra Reservoir ಕುಡಿಯುವ ನೀರಿಗೆ ಮಾತ್ರ: ನಾಲೆಯಲ್ಲಿ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಇದನ್ನು ಉಪಯೋಗಿಸಬಾರದು.
ಅಕ್ರಮ ನೀರೆತ್ತುವುದು ನಿಷೇಧ: ರೈತರು ನಾಲೆಯಿಂದ ಅಕ್ರಮವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕರಿಗೆ ಎಚ್ಚರಿಕೆ: ನೀರು ಹರಿಯುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಯಲ್ಲಿ ತಿರುಗಾಡುವುದಾಗಲಿ ಅಥವಾ ದನ-ಕರುಗಳನ್ನು ಕಾಲುವೆಗೆ ಇಳಿಸುವುದಾಗಲಿ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಕುಡಿಯುವ ನೀರಿನ ಅಭಾವ ತಪ್ಪಿಸಲು ಕೈಗೊಳ್ಳಲಾಗಿರುವ ಈ ಕ್ರಮಕ್ಕೆ ಸಾರ್ವಜನಿಕರು ಹಾಗೂ ರೈತಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ವಿನಂತಿಸಿದೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...

Bus Accident Sagra ಕಾಸ್ಪೋಡಿ ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ: 11 ಮಂದಿಗೆ ಗಾಯ

Bus Accident Sagra ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಒಟ್ಟು 48...