Wednesday, September 9, 2026
Wednesday, September 9, 2026

ಭದ್ರಾವತಿಯಲ್ಲಿ ಈರ್ವರು ಕಿಶೋರ ಕಾರ್ಮಿಕರ ಪತ್ತೆ

Date:

ಭದ್ರಾವತಿ ನಗರದ ತರೀಕೆರೆ ರಸ್ತೆ ಪ್ರದೇಶದಲ್ಲಿ ಸೆಪ್ಟೆಂಬರ್ 07 ರಂದು ಕಾರ್ಮಿಕ, ಆರೋಗ್ಯ, ಸಮಾಜ ಕಲ್ಯಾಣ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆಗಳು ಮತ್ತು ಮಕ್ಕಳ ಸಹಾಯವಾಣಿಯ ಸಹಯೋಗದೊಂದಿಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ನಿಯಂತ್ರಣಕ್ಕಾಗಿ ಅನಿರೀಕ್ಷಿತ ದಾಳಿ ಮತ್ತು ತಪಾಸಣೆ ಕೈಗೊಳ್ಳಲಾಯಿತು. ಈ ಕಾರ್ಯಾಚರಣೆಯ ವೇಳೆಯಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದ್ದು, ಅಧಿಕಾರಿಗಳ ತಂಡವು ತಕ್ಷಣವೇ ಆ ಮಕ್ಕಳನ್ನು ಕೆಲಸದ ಸ್ಥಳದಿಂದ ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದೆ. ಅಲ್ಲದೆ, ಸಂಬಂಧಪಟ್ಟ ಸಂಸ್ಥೆಯ ಮಾಲೀಕರಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಜಾಗೃತಿ ಮೂಡಿಸಲಾಯಿತು.
ಈ ವೇಳೆ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ತಾಲ್ಲೂಕು ಅರೋಗ್ಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಜರಿದ್ದರು..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...