Wednesday, September 9, 2026
Wednesday, September 9, 2026

ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ-2025 ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ ಪ್ರಶಸ್ತಿ

Date:

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ ನಗರವು ರಾಜ್ಯಮಟ್ಟದ ಎರಡು ಪ್ರಮುಖ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

​ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮದ (NCAP) ನಾನ್-ಅಟೈನ್‌ಮೆಂಟ್ ನಗರವಾಗಿರುವ ದಾವಣಗೆರೆಯು, ಜನಸಂಖ್ಯೆ ಆಧಾರಿತ ವರ್ಗೀಕರಣದಡಿ ಅತ್ಯುತ್ತಮ ಸಾಧನೆ ತೋರಿದೆ. ನಗರದ ಎಸ್‌ಎಸ್‌ ಬಡಾವಣೆ – ಬಿ ಬ್ಲಾಕ್ (ಜನಸಂಖ್ಯೆ ವರ್ಗ 2) ಹಾಗೂ ಡಿಸಿಎಂ ಟೌನ್‌ಶಿಪ್ (ಜನಸಂಖ್ಯೆ ವರ್ಗ 3) ಈ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿವೆ.

​ಸದರಿ ಗೌರವದೊಂದಿಗೆ ನಗರಕ್ಕೆ ಒಟ್ಟು ರೂ‌ 25.00 ಲಕ್ಷ ರೂಪಾಯಿಗಳ ನಗದು ಬಹುಮಾನ ಲಭಿಸಿದೆ. ವಾಯು ಮಾಲಿನ್ಯ ನಿಯಂತ್ರಣ, ಪರಿಸರ ಜಾಗೃತಿ ಹಾಗೂ ನೈರ್ಮಲ್ಯ ನಿರ್ವಹಣೆಯಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಮಹಾನಗರ ಪಾಲಿಕೆಯ ಸತತ ಪ್ರಯತ್ನಕ್ಕೆ ಈ ಪ್ರಶಸ್ತಿ ಸಾಕ್ಷಿಯಾಗಿದೆ.

​ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ದಾವಣಗೆರೆಯ ನಾಗರಿಕರು ತೋರಿದ ಸಹಕಾರ ಮತ್ತು ಶ್ರಮಕ್ಕೆ ಈ ಮೂಲಕ ಕೃತಜ್ಞತೆಗಳನ್ನು ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ನಗರದ ಗಾಳಿಯ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಬದ್ಧರಾಗಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

​State-Level Recognition for Davanagere City: Wins “Swachh Ward Vayu Survekshan 2025”

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...