Wednesday, September 9, 2026
Wednesday, September 9, 2026

“ಪ್ರತಿ ಹನಿಗೆ ಅಧಿಕ ಬೆಳೆ” ಯೋಜನೆ. ತುಂತುರು ನೀರಾವರಿ ಸೌಲಭ್ಯ ಪಡೆಯಲು ಇಲಾಖೆ ಪ್ರಕಟಣೆ

Date:

2026-27 ನೇ ಸಾಲಿನ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ಯಡಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ‘ಪ್ರತಿ ಹನಿಗೆ ಅಧಿಕ ಬೆಳೆ’ ಕಾರ್ಯಕ್ರಮದ ಮೂಲಕ ಹನಿ ಹಾಗೂ ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ.
ಸಹಾಯಧನದ ವಿವರ: 5ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45 ರ ದರದಲ್ಲಿ ಗರಿಷ್ಠ12.50 ಎಕರೆ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರು ಈ ಸೌಲಭ್ಯವನ್ನು ಪಡೆಯಬಹುದು.
ಮರು ಅಳವಡಿಕೆಗೆ ಅವಕಾಶ: ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿದ್ದು, ಪ್ರಸ್ತುತ ಉಪಕರಣಗಳು ಹಾಳಾಗಿದ್ದರೆ ಅಂತಹ ರೈತರು ಸಹ ಪುನಃ ಸಹಾಯಧನ ಪಡೆಯಲು ಅರ್ಹರಿರುತ್ತಾರೆ.
ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ, ಅನುದಾನದ ಲಭ್ಯತೆ ಹಾಗೂ ಜೇಷ್ಠತೆಯ ಆಧಾರದ ಮೇಲೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ ಅಥವಾ ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಬಹುದೆಂದು‌ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...