Wednesday, September 9, 2026
Wednesday, September 9, 2026

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ತೆಪ್ಪ ಬಳಕೆ: ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು- ಡೀಸಿ ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಈ ಹಿಂದೆ ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಳುಗಿ 12 ಜನರು ಸಾವನ್ನಪ್ಪಿದ್ದ ದುರಂತ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಅಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.
ಪ್ರಮುಖ ನಿಯಮಗಳು ಹಾಗೂ ನಿರ್ದೇಶನಗಳು:
ತೆಪ್ಪದ ಮೂಲಕ ವಿಸರ್ಜನೆ ಮಾಡುವಾಗ ತೆಪ್ಪದಲ್ಲಿ ಕೇವಲ 2 ರಿಂದ 3 ಜನರಿಗೆ ಮಾತ್ರ ಹೋಗಲು ಅವಕಾಶವಿರುತ್ತದೆ.
ಲೈಫ್ ಜ್ಯಾಕೆಟ್ ಕಡ್ಡಾಯ: ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್ ಧರಿಸಿರಬೇಕು.ನುರಿತ ಈಜುಗಾರರ ಸಮಕ್ಷಮದಲ್ಲೇ ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆಯನ್ನು ನಡೆಸತಕ್ಕದ್ದು.
ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...