Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ ಸೇರ್ಪಡೆಗೊಳಿಸಬೇಕು ಎಂದು ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿಗಾಗಿ ಬೆಂಗಳೂರಿನ ಹೊರಗಿನ ಐದು ನಗರಗಳಲ್ಲಿ ಶಿವಮೊಗ್ಗ ನಗರ ಗುರುತಿಸಬೇಕು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಪ್ರಾಥಮಿಕ ಕ್ಲಸ್ಟರ್, ವಿಮಾನ ನಿಲ್ದಾಣ ಮೂಲಸೌಕರ್ಯ, ಬಲಿಷ್ಠ ತಂತ್ರಜ್ಞಾನ ಮತ್ತು ಶೈಕ್ಷಣಿಕ ಮೂಲಾಧಾರ, ರೈಲು ಮತ್ತು ರಸ್ತೆ ಲಾಜಿಸ್ಟಿಕ್ಸ್ ಸಂಪರ್ಕವನ್ನು ಶಿವಮೊಗ್ಗ ಹೊಂದಿದೆ ಎಂದು ತಿಳಿಸಿದರು.
ಫೌಂಡ್ರಿ ಉದ್ಯಮ, ಆಹಾರ ಸಂಸ್ಕರಣೆ ಘಟಕ, ಕೃಷಿ ಉತ್ಪಾದನೆ, ಶಿಮೂಲ್, ಜವಳಿ ಉದ್ಯಮ ಸೇರಿ ಹೆಚ್ಚು ಪರಿಣತಿ ಹೊಂದಿರುವ ಹೆಚ್ಚು ಕೈಗಾರಿಕಾ ಘಟಕಗಳಿವೆ. ಶಿವಮೊಗ್ಗ ಪ್ರಮುಖ ಉತ್ಪಾದನಾ ಮತ್ತು ಎಂಜಿನಿಯರಿಂಗ್ ಕೇಂದ್ರವಾಗಿದೆ. ಈ ಎಲ್ಲ ಕಾರಣಗಳಿಂದ ಶಿವಮೊಗ್ಗ ಜಿಲ್ಲೆಯನ್ನು ಕೈಗಾರಿಕಾ ಅಭಿವೃದ್ಧಿ ನಗರವನ್ನಾಗಿ ಪರಿಗಣಿಸಬೇಕು ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡುವ ಮತ್ತು ಬೆಂಗಳೂರಿನ ಹೊರಗೆ ಹೂಡಿಕೆಗಳನ್ನು ಉತ್ತೇಜಿಸುವ ಕಾರ್ಯತಂತ್ರದ ಭಾಗವಾಗಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಜಿಲ್ಲೆಗಳಲ್ಲಿ ಕೈಗಾರಿಕಾ ಸೌಲಭ್ಯಗಳನ್ನು ಸ್ಥಾಪಿಸಲು ಸರ್ಕಾರವು ಬಹುಕಂಪನಿಗಳೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಬೇಕಿದೆ ಎಂದು ಹೇಳಿದರು.
ಬಿಯಾಂಡ್ ಬೆಂಗಳೂರು ಶಿವಮೊಗ್ಗ ನಗರವನ್ನು ಐಟಿ ಸೇವೆಗಳ ರಫ್ತುದಾರರನ್ನಾಗಿ ಅಭಿವೃದ್ಧಿಪಡಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ಡಿಜಿಟಲ್ ಶಕ್ತಿ ಕೇಂದ್ರವಾಗುವ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಶಿವಮೊಗ್ಗ ಐಟಿ ಕಂಪನಿಗಳಿಗೆ ಕೇಂದ್ರವಾಗುವ ಸಾಮರ್ಥ್ಯ ಹೊಂದಿದೆ. ಈ ದಿಸೆಯಲ್ಲಿ ನಮ್ಮ ಸಂಸ್ಥೆಯು ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಕೈ ಜೋಡಿಸುತ್ತದೆ ಎಂದರು.
Chamber of commerce Shivamogga ಸರ್ಕಾರವು ಮೂಲಸೌಕರ್ಯವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಹೂಡಿಕೆ ಮಾಡಬೇಕು. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆಗಳ ಉದ್ಯಮವನ್ನು ಸರ್ಕಾರವು ಬೆಂಬಲಿಸುವುದು ನಿರ್ಣಾಯಕವಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಎಸ್.ಪಿ.ಶಂಕರ್, ಬಿ.ಸುರೇಶ್ ಕುಮಾರ್, ರವಿಪ್ರಕಾಶ್ ಜೆನ್ನಿ, ಗಣೇಶ್ ಅಂಗಡಿ, ಕೆ.ಬಿ.ಶಿವಕುಮಾರ್, ಎಸ್.ಎಸ್.ಉದಯ್ ಕುಮಾರ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎ.ಎಲ್.ಚಂದ್ರಶೇಖರ್, ಜಿಲ್ಲಾ ಔಷಧಿ ವರ್ತಕರ ಸಂಘದ ಅಧ್ಯಕ್ಷ ಮಧುಕರ್ ಶೆಟ್ಟಿ, ಕಾರ್ಯದರ್ಶಿ ರಾಜೇಶ್, ಸಾಗರ ರಸ್ತೆ ಕೈಗಾರಿಕಾ ಸಂಘದ ಕಾರ್ಯದರ್ಶಿ ನಾಗೇಶ್, ಮಂಡ್ಲಿ ಕಲ್ಲೂರ್ ಕೈಗಾರಿಕಾ ಸಂಘದ ಪದಾಧಿಕಾರಿಗಳು, ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಕಿರಣ್, ಡಿಸ್ಟ್ರಿಬ್ಯೂಟರ್ ಅಸೋಸಿಯೇಷನ್ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಚಂದ್ರಶೇಖರ್, ಜವಳಿ ವರ್ತಕರ ಸಂಘದ ಕಾರ್ಯದರ್ಶಿ ಪ್ರಭಾಕರ್ ಇತರರಿದ್ದರು.
