Friday, September 11, 2026
Friday, September 11, 2026

ಬಡಾವಣೆಗಳಲ್ಲಿ ಸುಗಮ ಸಂಚಾರಕ್ಕೆ ರಸ್ತೆ & ನೈರ್ಮಲ್ಯ ಕಾಪಾಡಲು ವ್ಯವಸ್ಥಿತ ಚರಂಡಿ ನಿರ್ಮಾಣ- ಎಸ್.ಎನ್.ಚನ್ನಬಸಪ್ಪ

Date:

ಶಿವಮೊಗ್ಗ: ನಗರದ ಬಡಾವಣೆಗಳಲ್ಲಿ ಸುಗಮ ಸಂಚಾರಕ್ಕೆ ಸುಸಜ್ಜಿತ ರಸ್ತೆ ಹಾಗೂ ನೈರ್ಮಲ್ಯ ಕಾಪಾಡಲು ವ್ಯವಸ್ಥಿತ ಚರಂಡಿ ನಿರ್ಮಾಣ ನಮ್ಮ ಪ್ರಮುಖ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು. ಇಂದು ಬೆಳಿಗ್ಗೆ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 14ರ ವಿದ್ಯಾನಗರ, ವಾರ್ಡ್ ನಂ. 5ರ ಪುರಲೆ ಹಾಗೂ ವಾರ್ಡ್ ನಂ. 34ರ ನಂಜಪ್ಪ ಲೇಔಟ್‌ನಲ್ಲಿ ನೂತನ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗದಂತೆ ಮತ್ತು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿ ಶ್ರೀ ನವುಲೆ ಮಂಜುನಾಥ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಹರೀಶ್, ಪ್ರಮುಖರಾದ ಶ್ರೀ ಲಕ್ಷ್ಮಣ್, ಶ್ರೀ ಮಲ್ಲಿಕಾರ್ಜುನ, ಶ್ರೀ ಜಗದೀಶ್, ವಾರ್ಡ್ ಅಧ್ಯಕ್ಷರಾದ ಶ್ರೀ ಮಾಲತೇಶ ಸೇರಿದಂತೆ ಸ್ಥಳೀಯ ಪ್ರಮುಖರು, ಕಾರ್ಯಕರ್ತ ಬಂಧುಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...