Friday, September 11, 2026
Friday, September 11, 2026

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

Date:

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಮತ್ತು ನಾಗರಿಕರಿಗೆ ಸುಗಮ ಸಂಚಾರ ಒದಗಿಸುವುದು ನಮ್ಮ ಪ್ರಮುಖ ಸಂಕಲ್ಪವಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.

ಇಂದು ಸಂಜೆ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 1ರ ಸರ್ವಜ್ಞ ನಗರ, ವಾರ್ಡ್ ನಂ. 3ರ ಬೊಮ್ಮನಕಟ್ಟೆ ‘ಎಫ್’ ಬ್ಲಾಕ್ ಹಾಗೂ ವಾರ್ಡ್ ನಂ. 6ರ ಗಾಡಿಕೊಪ್ಪದ ಬಡಾವಣೆಗಳಲ್ಲಿ ನೂತನ ರಸ್ತೆ ನಿರ್ಮಾಣ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಜನಪರ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಬಡಾವಣೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಾಗ ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು, ನಿಗದಿತ ಕಾಲಮಿತಿಯೊಳಗೆ ಅತ್ಯುನ್ನತ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

S. N. Channabasappa ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ನಗರ ಉಪಾಧ್ಯಕ್ಷರಾದ ಶ್ರೀ ಗಾಡಿಕೊಪ್ಪ ಕುಮಾರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನವಲೆ ಮಂಜು, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀಮತಿ ಆಶಾ ಚಂದ್ರಪ್ಪ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ನವಲೆ ರವೀಂದ್ರ, ವಾರ್ಡ್ ಅಧ್ಯಕ್ಷರಾದ ಶ್ರೀ ಶಿವು, ಪಾಲಿಕೆಯ ಇಂಜಿನಿಯರ್‌ಗಳು, ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...