ಈ ದಿನ ದಿನಾಂಕ 12-09-2026 ರಂದು ಗೌರಿ-ಗಣಪತಿ ಹಬ್ಬದ ಪ್ರಯುಕ್ತ ಸಾರ್ವಜನಿಕ ವಾಹನ ಸವಾರರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಮತ್ತು ಸಾರ್ವಜನಿಕರಿಗೆ ಒಂದೇ ಕಡೆ ಎಲ್ಲಾ ಪೂಜೆ ಸಾಮಗ್ರಿಗಳು ದೊರೆಯುವಂತೆ ಮಾಡುವ ಉದ್ದೇಶದಿಂದ ಶನಿವಾರ ಮತ್ತು ಭಾನುವಾರ ರಂದು ಶಿವಮೊಗ್ಗ ನಗರದ ಶಿವಪ್ಪನಾಯಕನ ಸರ್ಕಲ್ನಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಹಣ್ಣು, ಹೂವು ಹಾಗೂ ಪೂಜಾ ಸಾಮಗ್ರಿಗಳ ವ್ಯಾಪಾರ ಮಾಡಲು ತಾತ್ಕಾಲಿಕವಾಗಿ ಅವಕಾಶ ಕಲ್ಪಿಸಲಾಗಿದೆ.
ಹಬ್ಬದ ಪ್ರಯುಕ್ತ ನಡೆಯುವ ವ್ಯಾಪಾರ ಮುಕ್ತಾಯಗೊಂಡ ನಂತರ ಸದರಿ ರಸ್ತೆಯಲ್ಲಿ ಹಣ್ಣು, ಹೂವು ಹಾಗೂ ಇತರೆ ಯಾವುದೇ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಇರುವುದಿಲ್ಲ.
ಆದ್ದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಈ ತಾತ್ಕಾಲಿಕ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.
ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ
