Thursday, September 17, 2026
Thursday, September 17, 2026

ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ

Date:

ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಿನಾಂಕ : 23-09-2026 ರಿಂದ 22-10-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕೀಸ್, ಕೋಕೋನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕೀಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಗೆ ಒಟ್ಟು ರೂ. 4,500/- ಶುಲ್ಕವಿದ್ದು, ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
ಆಸಕ್ತರು ತರಬೇತಿ ಶುಲ್ಕವನ್ನು ಪಾವತಿಸಿ, ದಿನಾಂಕ: 22-09-2026 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಡಾ. ಜಯಶ್ರೀ ಎಸ್., ಕೃಷಿ ಮಹಾವಿದ್ಯಾಲಯ, ನವುಲೆ, ಶಿವಮೊಗ್ಗ – 9449187763, ಜಯಶಂಕರ್ – 9686555897 ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ನವುಲೆ ಕೃಷಿ ಮಹಾವಿದ್ಯಾಲಯದ ತಿಳಿಸಿದೆ.
✒️

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...