Tuesday, November 3, 2026
Tuesday, November 3, 2026

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

Date:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 01 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 29 ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕ್ರೀಡಾ ಸ್ಪರ್ಧೆಗಳು: 60-80 ವರ್ಷದ ಪುರುಷ/ಮಹಿಳೆಯರಿಗೆ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಮತ್ತು ಚೆಂಡನ್ನು ಬಕೆಟ್‌ನಲ್ಲಿ ಹಾಕುವುದು.
ಸಾಂಸ್ಕೃತಿಕ ಸ್ಪರ್ಧೆಗಳು: 60-80 ವರ್ಷದ ಪುರುಷ/ಮಹಿಳೆಯರಿಗೆ ಏಕಪಾತ್ರಾಭಿನಯ, ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು 60 ವರ್ಷ ಮೇಲ್ಪಟ್ಟವರಾಗಿದ್ದು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರೀಕರ ಗುರುತಿನ ಚೀಟಿಯೊಂದಿಗೆ ಸೆ.27 ರೊಳಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಡಿ.ವೈ.ಎಸ್.ಪಿ. ಕಚೇರಿ ಆವರಣ, ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳುವುದು. ನೊಂದಣಿಗಾಗಿ ರವೀಂದ್ರ-9164444370, ಗಣೇಶ-8431109184, ಕಚೇರಿ ದೂ.ಸಂ.: 08182-221188/280424 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...