Friday, September 18, 2026
Friday, September 18, 2026

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Date:

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ ಹಾಗೂ ಜೀವ ವಿಮಾ ಪ್ರತಿನಿಧಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಲಿಯಾಫೆ ಶಿವಮೊಗ್ಗ ವಿಭಾಗದ ಅಧ್ಯಕ್ಷ ಎ.ವೀರೇಶಪ್ಪ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಜೀವ ವಿಮಾ ಪ್ರತಿನಿಧಿಗಳು ಸಮಾಜದ ಸುರಕ್ಷತೆ ಹಾಗೂ ಕುಟುಂಬಗಳ ಆರ್ಥಿಕ ಭದ್ರತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಸಂಘದ ಅಧ್ಯಕ್ಷೆ ಎನ್.ಎಸ್. ಭಾರತಿ ಮಾತನಾಡಿ, ಸದಸ್ಯರಿಗೆ ಸರ್ಕಾರದಿಂದ ದೊರೆಯಬಹುದಾದ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಲಾಗುವುದು. ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸುವ ಆಶಯವಿದೆ ಎಂದು ತಿಳಿಸಿದರು.

ಸಂಘದ ಕಾರ್ಯದರ್ಶಿ ಈಶ್ವರ ಬಿ.ವಿ. ಮಾತನಾಡಿ, ಜೀವ ವಿಮಾ ಪ್ರತಿನಿಧಿಗಳು ವಿಮೆಯನ್ನು ಮಾರಾಟ ಮಾಡುವುದಷ್ಟೇ ಅಲ್ಲದೆ, ಕುಟುಂಬಗಳ ಭದ್ರತೆಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಜೀವ ವಿಮೆ ಕುಟುಂಬಕ್ಕೆ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದು ಹೇಳಿದ ಅವರು, ಪ್ರತಿನಿಧಿಗಳನ್ನು ಹುರಿದುಂಬಿಸಿದರು. ತಿರಸ್ಕಾರಕ್ಕೆ ಹೆದರಬೇಡಿ, ಪ್ರತಿ ತಿರಸ್ಕಾರವೂ ಹೊಸ ಅವಕಾಶಕ್ಕೆ ದಾರಿ ಎಂದು ಕರೆ ನೀಡಿದರು.

Chamber of Commerce Shivamogga ಕಾರ್ಯಕ್ರಮದಲ್ಲಿ ರಾಜಶೇಖರ್ ಕೆ.ಎಂ., ಸುಧೀರ್ ನಾಯಕ್, ಬಸವರಾಜಪ್ಪ ಡಿ., ಹೆಚ್.ಎನ್. ರಮೇಶ್, ಎಸ್. ವೆಂಕಟೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶಿವಮೊಗ್ಗದ ಒಂದು ಮತ್ತು ಎರಡನೇ ಶಾಖೆಗಳ ಜೀವ ವಿಮಾ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...