Saturday, September 19, 2026
Saturday, September 19, 2026

ಶಿಕಾರಿಪುರದಲ್ಲಿ ರೈತರ ಧರಣಿ: 7 ಗಂಟೆ ವಿದ್ಯುತ್, ಕೆರೆ ತುಂಬಿಸುವಂತೆ ಆಗ್ರಹ

Date:

ಶಿಕಾರಿಪುರ ತಾಲೂಕಿನ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.

ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಏತ ನೀರಾವರಿ ಯೋಜನೆಗಳಿಗೆ ಅಗತ್ಯ ವಿದ್ಯುತ್ ಒದಗಿಸಿ, ತಾಲೂಕಿನ ಎಲ್ಲಾ ಕೆರೆಗಳನ್ನು ತಕ್ಷಣವೇ ತುಂಬಿಸಬೇಕು ಎಂದು ಒತ್ತಾಯಿಸಿದರು.

ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಶಿಕಾರಿಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಿಸಬೇಕು ಹಾಗೂ ರೈತರ ಇತರೆ ಪ್ರಮುಖ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಹೆಚ್. ಹಾಲಪ್ಪ, ಪಕ್ಷದ ಹಿರಿಯ ಮುಖಂಡ ಕೆ.ಎಸ್. ಗುರುಮೂರ್ತಿ, ಸ್ಥಳೀಯ ಜನಪ್ರತಿನಿಧಿಗಳು, ನೂರಾರು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...