ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾ ಭೂಮಿಗೆ ಭೇಟಿ ನೀಡಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2026-27 ನೇ ಸಾಲಿನ ಯೋಜನೆಯಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಅಕ್ಟೋಬರ್ 21 ರಂದು ನಾಗಪುರದಲ್ಲಿ ನಡೆಯಲಿರುವ ‘ಧಮ್ಮ ಚಕ್ರ ಪ್ರವರ್ತನ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಪ್ರವಾಸವು ಅಕ್ಟೋಬರ್ 19 ರಿಂದ 22 ರವರೆಗೆ ನಡೆಯಲಿದೆ.
ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಖಾಯಂ ನಿವಾಸಿಗಳಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿರಬೇಕು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ swdservices.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 9480843044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08182-249241 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ ಅವರು ತಿಳಿಸಿದ್ದಾರೆ.
ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
Date:
