ಸರ್ಕಾರಕ್ಕೆ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಒಟ್ಟು 9 ವಾಹನಗಳನ್ನು ವಿಲೇವಾರಿ ಮಾಡಲು ಪ್ರಾದೇಶಿಕ ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಾಜು ನಡೆಯುವ ಸ್ಥಳ ಮತ್ತು ಸಮಯ:
ಸೆಪ್ಟೆಂಬರ್ 25 ರ ಮಧ್ಯಾಹ್ನ 3:00 ಗಂಟೆಗೆ
ಮಲವಗೊಪ್ಪದಲ್ಲಿರುವ ಚಾಲನಾ ತರಬೇತಿ ಟ್ರ್ಯಾಕ್, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಆಸಕ್ತ ಸಾರ್ವಜನಿಕರು ಹಾಗೂ ಬಿಡ್‌ದಾರರು ನಿಗದಿತ ಸಮಯಕ್ಕೆ ಸರಿಯಾಗಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಇಲಾಖೆ ಮನವಿ ಮಾಡಿದೆ.
ಸೆಪ್ಟೆಂಬರ್ 25ರಂದು ತೆರಿಗೆ ಬಾಕಿ ಉಳಿಸಿಕೊಂಡಿರುವ 9 ವಾಹನಗಳ ಬಹಿರಂಗ ಹರಾಜು
Date:
