ಶಿವಮೊಗ್ಗದ ಇರುವಕ್ಕಿ ಮುಖ್ಯ ಆವರಣದಲ್ಲಿ ಸೆಪ್ಟೆಂಬರ್ 21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ಐಸಿಎಆರ್–ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ತುಷಾರ್ ಕಾಂತಿ ಬೆಹೆರಾ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯ ಹಾಗೂ ಶಾಸಕ ಜಿ.ಹೆಚ್. ಶ್ರೀನಿವಾಸ, ಪ್ರಗತಿಪರ ರೈತರಾದ ಜೆ.ಜಿ. ಕಾವೇರಿಯಪ್ಪ, ಹೆಚ್.ಡಿ. ದೇವಿಕುಮಾರ್, ಹೆಚ್.ಎಸ್. ಶಶಾಂಕ್, ಶಿಕ್ಷಣ ತಜ್ಞ ಟಿ. ಬಸವರಾಜ ನಾಯ್ಕ ಹಾಗೂ ಕೃಷಿ ಉದ್ಯಮಿದಾರ ಯೋಗೇಶ್ವರ ಎಚ್.ಆರ್. ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
