Monday, September 21, 2026
Monday, September 21, 2026

ಹಿರಿಯ ನಾಗರಿಕರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಜ್ಯೋತಿ ಪ್ರಕಾಶ್

Date:

ಹಿರಿಯ ನಾಗರಿಕರು ಸಾಧಕರು ಹಾಗೂ ಸಮಾಜದ ಆಸ್ತಿ. ಅವರ ಮಾರ್ಗದರ್ಶನ, ಸಲಹೆ ಮತ್ತು ಸಹಕಾರವು ಕುಟುಂಬವನ್ನು ಸರಿದಾರಿಯಲ್ಲಿ ಮುನ್ನಡೆಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಸೋಡಾ ಅಧ್ಯಕ್ಷರು ಹಾಗೂ ವೀರಶೈವ ಬಸವೇಶ್ವರ ಸಮಾಜದ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿ ಪ್ರಕಾಶ್ ಹೇಳಿದರು.

ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಸರ್ವ ಸದಸ್ಯರ ಮಹಾಸಭೆ, ಹಿರಿಯ ನಾಗರಿಕರ ಸನ್ಮಾನ, ಸಾಧಕರ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಸಂಘಟನೆ ಅತ್ಯಂತ ಮುಖ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ರಾಜ್ಯ ಉಪಾಧ್ಯಕ್ಷರಾದ ಬಿ.ಕೆ. ಶಿವಕುಮಾರ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಗಾಣಿಗ ಸಮಾಜವು ಅಲ್ಪಸಂಖ್ಯಾತವಾಗಿದ್ದರೂ ಒಗ್ಗಟ್ಟಿನಿಂದ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಈ ಕಾರ್ಯಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಂಘದ ಹಿರಿಯ ಉಪಾಧ್ಯಕ್ಷರಾದ ಬಿ.ಕೆ. ಜಗನ್ನಾಥ್ ಮಾತನಾಡಿ, ಸಮಾಜದ ಸದಸ್ಯರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಪ್ರಗತಿ ಸಾಧಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಂಘ ನಡೆದು ಬಂದ ದಾರಿ ಹಾಗೂ ಮುಂದಿನ ದಿನಗಳಲ್ಲಿ ಸಂಘದ ಸ್ವಂತ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ವಿವರಿಸಿದರು. ಈ ಕಾರ್ಯಕ್ಕೆ ಎಲ್ಲರೂ ಪ್ರಾಮಾಣಿಕ ಸಹಕಾರ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಾಣಿ ಕೋಟಿ ಪ್ರಾರ್ಥಿಸಿದರು. ನಿರ್ದೇಶಕರಾದ ಎಂ.ಆರ್. ಕಿರಣ್ ಕುಮಾರ್ ಸ್ವಾಗತಿಸಿದರು. ಈ ಹಿಂದೆ ನಿಧನರಾದ ಸಮಾಜ ಬಾಂಧವರ ಹೆಸರುಗಳನ್ನು ಪರಮೇಶ್ವರಪ್ಪ ಅವರು ವಾಚಿಸಿದರು. ಬಳಿಕ ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.

ಮಂಜಪ್ಪ ಸಜ್ಜನಶೆಟ್ಟರ್ ಹಿಂದಿನ ವರ್ಷದ ಸಭೆಯ ನಡಾವಳಿಯನ್ನು ಓದಿದರು. ಪ್ರಧಾನ ಕಾರ್ಯದರ್ಶಿ ವಾಗೀಶ್ ಕೋಟಿ ವಾರ್ಷಿಕ ವರದಿ ಹಾಗೂ ಮುಂದಿನ ವರ್ಷದ ಕಾರ್ಯಯೋಜನೆಯನ್ನು ಮಂಡಿಸಿದರು. ಖಜಾಂಚಿ ರವಿ ಅಜ್ಮನಿ ಲೆಕ್ಕಪತ್ರವನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಶಿವಕುಮಾರ್ ಹಾಗೂ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಶಶಾಂಕ್ ಸಜ್ಜನ್ ಅವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ದಯಾನಂದ್ ವಂದನಾರ್ಪಣೆ ಸಲ್ಲಿಸಿದರು. ನಿರ್ದೇಶಕರಾದ ಸುಮನ ನರೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾದ ಸುರೇಶ್ ಬಾಬು, ಮಾಸೂರು ಘಟಕದ ಅಧ್ಯಕ್ಷರಾದ ಆರ್.ಸಿ. ರೇಣುಕಪ್ಪ, ಭದ್ರಾವತಿ ಘಟಕದ ಅಧ್ಯಕ್ಷರಾದ ಟಿ.ಎಸ್. ಆನಂದ್ ಕುಮಾರ್, ಸಂಘದ ಉಪಾಧ್ಯಕ್ಷರಾದ ಎನ್.ಜಿ. ಲೋಕೇಶ್ವರಪ್ಪ, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...