Tuesday, September 22, 2026
Tuesday, September 22, 2026

ಶಿವಮೊಗ್ಗದಲ್ಲಿ ಸೆ.24 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 24-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...