2026-27 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅ.21 ರಂದು ನಡೆಯಲಿರುವ ಪ್ರವರ್ತನಾ ದಿನ ಕಾರ್ಯಕ್ರಮದ ಯಾತ್ರೆಗೆ ಅ.18 ರಿಂದ 22 ರವರೆಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swdservices.karnataka.gov.in ಮೂಲಕ ದಿ:09/10/2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿಬೇಕು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480843194 ಹಾಗೂ ಕಚೇರಿ ದೂ.ಸಂ: 08182-240512 ಗಳನ್ನು ಸಂಪರ್ಕಿಸುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬೇಡ್ಕರ್ ದೀಕ್ಷಾ ಭೂಮಿ ಭೇಟಿಗೆ ಯಾತ್ರಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ
Date:
