Tuesday, September 22, 2026
Tuesday, September 22, 2026

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಆರೋಗ್ಯದ ಕುರಿತು ಅರಿವು ಮೂಡಿಸಿದ ‘ಆರೋಗ್ಯ ಸ್ಪಂದನ’ ಕಾರ್ಯಕ್ರಮ

Date:

ಆರೋಗ್ಯದ ಮಹತ್ವ ಹಾಗೂ ವಿವಿಧ ಕಾಯಿಲೆಗಳಿಂದ ದೂರವಿರಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಡಿಲು ಮಹಿಳಾ ಸೇವಾ ಸಂಘ (ರಿ.), ಶಿವಮೊಗ್ಗ, ಕರ್ನಾಟಕ ಪಬ್ಲಿಕ್ ಸ್ಕೂಲ್, ಪಿಳ್ಳಂಗೇರಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿ ಇವರ ಸಂಯುಕ್ತ ಆಶ್ರಯದಲ್ಲಿ ‘ಆರೋಗ್ಯ ಸ್ಪಂದನ’ ಕಾರ್ಯಕ್ರಮವನ್ನು ಪಿಳ್ಳಂಗೇರಿ ಕೆಪಿಎಸ್‌ನಲ್ಲಿ ಆಯೋಜಿಸಲಾಗಿತ್ತು.

ಖ್ಯಾತ ವೈದ್ಯರಾದ ಪ್ರೊ. ಡಾ. ಆಂಜನಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಮಹತ್ವ ಹಾಗೂ ವಿವಿಧ ಕಾಯಿಲೆಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಉಪಯುಕ್ತ ಮಾಹಿತಿ ನೀಡಿದರು.

ಡಾ. ಅಭಿಷೇಕ್ ಅವರು ಆರೋಗ್ಯ ಸ್ಪಂದನ ಕಾರ್ಯಕ್ರಮದ ಉದ್ದೇಶ ಹಾಗೂ ಆರೋಗ್ಯದ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಡಾ. ಆಂಜನಪ್ಪ ಅವರನ್ನು ಮಡಿಲು ಮಹಿಳಾ ಸೇವಾ ಸಂಘ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಶಾಲು, ಸ್ಮರಣಿಕೆ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕೆಪಿಎಸ್ ವತಿಯಿಂದ ಡಾ. ಸುಮಂಗಳಾ ಪಿ. ಕುಚಿನಾಡ, ವರಲಕ್ಷ್ಮಿ ಹಾಗೂ ಡಾ. ಅಭಿಷೇಕ್ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವೈ.ಎಂ. ಧರ್ಮಪ್ಪ ಕಾರ್ಯಕ್ರಮ ನಿರೂಪಿಸಿದರು. ಜುಬೇದ ಬೇಗಂ ಅವರು ಡಾ. ಆಂಜನಪ್ಪ ಅವರನ್ನು ಪರಿಚಯಿಸಿದರು. ಶಿಕ್ಷಕ ಅಣ್ಣಪ್ಪ ವಂದಿಸಿದರು.

ಕಾರ್ಯಕ್ರಮದಲ್ಲಿ ಕೆಪಿಎಸ್ ಪಿಳ್ಳಂಗೇರಿಯ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ವಿಭಾಗದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಆರೋಗ್ಯಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಪಡೆದುಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಎಸ್‌ನ ಉಪಪ್ರಾಂಶುಪಾಲರಾದ ಶ್ರೀನಿವಾಸ್ ವಹಿಸಿದ್ದರು. ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿಯ ರೊಟೇರಿಯನ್ ಹಾಗೂ ಮಡಿಲು ಮಹಿಳಾ ಸೇವಾ ಸಂಘದ ರಾಜ್ಯಾಧ್ಯಕ್ಷೆ, ವಿಶ್ರಾಂತ ಡಿಡಿಪಿಐ ಡಾ. ಸುಮಂಗಳಾ ಪಿ. ಕುಚಿನಾಡ ಅವರು ಸ್ವಾಗತಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿಯ ಅಧ್ಯಕ್ಷರಾದ ಹುಲಿರಾಜ್ ಗುಬ್ಬಿ, ರೊಟೇರಿಯನ್ಸ್ ಡಾ. ಸನಾವುಲ್ಲಾ, ಡಾ. ಮುರಳೀಧರ್, ರಮಾ ಗುಬ್ಬಿ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಪಿಯು ಕಾಲೇಜಿನ ಪ್ರಾಂಶುಪಾಲರಾದ ತ್ರಯಂಬಕ, ಪಿಡಿಒ ವಿನಯ್, ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ವರಲಕ್ಷ್ಮಿ ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...