ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿ.ಬಿ.ಟಿ (ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಶಿವಮೊಗ್ಗ ಜಿಲ್ಲೆಯ ವಿಶೇಷ ವಿಕಲಚೇತನ ವ್ಯಕ್ತಿಗಳು ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾಸಿಂಧು/ಸೇವಾ ಒನ್ https://sevaone.karnataka.gov.in;ಪೋರ್ಟಲ್ ಮೂಲಕ ದಿನಾಂಕ 22-09-2026 ರಿಂದ 30-10-2026 ರವರೆಗೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ನಿಗದಿತ ಅಂತಿಮ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಅರ್ಹ ವಿಕಲಚೇತನರು ಸೌಲಭ್ಯ ಪಡೆಯಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Date:
