Monday, September 28, 2026
Monday, September 28, 2026

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

Date:

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಅವರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರು ಹಾಗೂ ಕುಟುಂಬದವರು ಆತ್ಮೀಯವಾಗಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ವಿಜಯಲಕ್ಷ್ಮಿ ಕಡಂಬ, ಕಾರ್ಯದರ್ಶಿ ಶ್ವೇತಾ ಸಚಿನ್, ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಸೇರಿದಂತೆ ಕಾಟನ್ ಜಗದೀಶ್, ಮಂಜುಳಾ, ಕೇಶವ್, ವಾಣಿ ಜಗದೀಶ್, ಭಾರತಿ, ದೀಪು, ಪರಿಸರ ನಾಗರಾಜ್, ಸತೀಶ್, ಚಂದ್ರಣ್ಣ, ರಾಧಾಕೃಷ್ಣ, ವಿನಯ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ವಿಜಯಲಕ್ಷ್ಮಿ ಕಡಂಬ, ಕುಟುಂಬ ಮಿಲನ ಕಾರ್ಯಕ್ರಮಗಳು ಸದಸ್ಯರ ನಡುವೆ ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವುದರ ಜೊತೆಗೆ, ಕುಟುಂಬ ಸದಸ್ಯರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗುತ್ತವೆ ಎಂದು ಹೇಳಿದರು.

JCI Shivamogga ಸ್ನೇಹ, ಆತ್ಮೀಯತೆ ಹಾಗೂ ಪರಸ್ಪರ ಸಹಕಾರದ ವಾತಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯರು ಮತ್ತು ಕುಟುಂಬದವರು ಸಂಭ್ರಮದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...