Tuesday, September 29, 2026
Tuesday, September 29, 2026

ಕುಡಿಯುವ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ತಕ್ಷಣ ಪರಿಹಾರಕ್ಕೆ ಸೂಚನೆ

Date:

ಶಿವಮೊಗ್ಗ ನಗರದ ಜನಸಾಮಾನ್ಯರಿಗೆ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಯಾವುದೇ ಲೋಪಗಳನ್ನು ಸಹಿಸುವುದಿಲ್ಲ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ 23ನೇ ವಾರ್ಡಿನ ಗಂಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ 22ನೇ ವಾರ್ಡಿನ ಉಪ್ಪಾರಕೇರಿ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಬಗ್ಗೆ ಸಾರ್ವಜನಿಕರು ಶಾಸಕರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಖುದ್ದು ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ನೀರು ಸರಬರಾಜು ಪೈಪ್‌ಲೈನ್ ಹಾಗೂ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಬಡಾವಣೆಯ ಸಾರ್ವಜನಿಕರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದ ಶಾಸಕರು, “ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಕ್ಷಣವೇ ಪರ್ಯಾಯ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು.” ಎಂದು ಮಹಾನಗರ ಪಾಲಿಕೆಯ ನೀರು ಸರಬರಾಜು ವಿಭಾಗದ ಎಂಜಿನಿಯರ್‌ಗಳಿಗೆ ಸ್ಥಳದಲ್ಲೇ ಆದೇಶಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಾಲಿಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...