Tuesday, September 29, 2026
Tuesday, September 29, 2026

ಶಿವಮೊಗ್ಗದಲ್ಲಿ ಶಿಕ್ಷಕರ ಗಾಯನ ಸಮ್ಮಿಲನ-3 ಯಶಸ್ವಿ

Date:

ಕೆಲಸದ ಒತ್ತಡದ ನಡುವೆ ಸಂಗೀತವು ಮನಸ್ಸಿಗೆ ಶಾಂತಿ ಮತ್ತು ಸಂತೋಷವನ್ನು ನೀಡುತ್ತದೆ. ಶಿಕ್ಷಕರಲ್ಲಿರುವ ಸಂಗೀತ ಪ್ರತಿಭೆಯನ್ನು ಹೊರತರುವ ಇಂತಹ ಕಾರ್ಯಕ್ರಮಗಳ ಆಯೋಜನೆ ಉತ್ತಮ ಕಾರ್ಯ ಎಂದು ಕರ್ನಾಟಕ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಹೇಳಿದರು.

ನಗರದ ವಾಣಿಜ್ಯ ಭವನದಲ್ಲಿ ಸೆ. 27ರಂದು ಶಿಕ್ಷಕರ ಗಾಯನ ವೇದಿಕೆ, ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ‘ಶಿಕ್ಷಕರ ಗಾಯನ ಸಮ್ಮಿಲನ-3’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಕ್ಷಕರು ತಮ್ಮ ವೃತ್ತಿಯ ಒತ್ತಡದ ನಡುವೆಯೂ ಸಂಗೀತದಂತಹ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಇಂತಹ ಕಾರ್ಯಕ್ರಮಗಳು ಶಿಕ್ಷಕರಲ್ಲಿನ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ ಸಂಗೀತಾಸಕ್ತರನ್ನು ಒಂದೆಡೆ ಸೇರಿಸುವ ಉತ್ತಮ ವೇದಿಕೆಯಾಗಿವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 60 ಶಿಕ್ಷಕರು ಭಾಗವಹಿಸಿ, 60ಕ್ಕೂ ಹೆಚ್ಚು ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಈ ಸಂದರ್ಭದಲ್ಲಿ ಭಾವಗಾನ ತಂಡದ ಸ್ಥಾಪಕರಾದ ಹಾಗೂ ಪ್ರಖ್ಯಾತ ಗಾಯಕರಾದ ಭದ್ರಾವತಿ ವಾಸು ಮತ್ತು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕುಬೇರ್ ನಾಯ್ಕ್ ಅವರನ್ನು ಶಿಕ್ಷಕರ ಗಾಯನ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಕರಲ್ಲಿ ಅಡಗಿರುವ ಸಂಗೀತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಸಂಗೀತದ ಮೂಲಕ ಶಿಕ್ಷಕರಲ್ಲಿ ಉತ್ಸಾಹ ಮತ್ತು ಸಂತಸ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ‘ಶಿಕ್ಷಕರ ಗಾಯನ ಸಮ್ಮಿಲನ-3’ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...