Wednesday, September 30, 2026
Wednesday, September 30, 2026

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀ-ಪೇಯ್ಡ್ ಆಟೋಗಳ ದಿಢೀರ್ ತಪಾಸಣೆ

Date:

ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಕೌಂಟರ್‌ನಿಂದ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಶಿವಮೊಗ್ಗ ಸಂಚಾರ ಪೊಲೀಸರು ಇಂದು ಬೆಳಗಿನ ಜಾವ ಅನಿರೀಕ್ಷಿತ ತಪಾಸಣೆ ನಡೆಸಿದರು.

ಸೆಪ್ಟೆಂಬರ್ 30ರಂದು ಬೆಳಗಿನ ಜಾವ 4:30ರಿಂದ ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಟೋ ಚಾಲಕರಿಗೆ ಪ್ರೀ-ಪೇಯ್ಡ್ ಟಿಕೆಟ್‌ನಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಹಣವನ್ನು ಪ್ರಯಾಣಿಕರಿಂದ ಪಡೆಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಬೆಂಗಳೂರು–ತಾಳಗುಪ್ಪ ರೈಲಿನಲ್ಲಿ ಆಗಮಿಸಿದ ಪ್ರಯಾಣಿಕರು ಒಟ್ಟು 112 ಪ್ರೀ-ಪೇಯ್ಡ್ ಆಟೋ ಟಿಕೆಟ್‌ಗಳನ್ನು ಪಡೆದು ಪ್ರಯಾಣಿಸಿರುವುದು ಗಮನಕ್ಕೆ ಬಂದಿದೆ.

ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಪ್ರೀ-ಪೇಯ್ಡ್ ಕೌಂಟರ್‌ನಲ್ಲಿ ಟಿಕೆಟ್ ಪಡೆದು, ನಿಗದಿತ ದರದಂತೆ ಸುರಕ್ಷಿತ ಹಾಗೂ ಪಾರದರ್ಶಕವಾಗಿ ಪ್ರಯಾಣಿಸುವಂತೆ ಪೊಲೀಸರು ಜಾಗೃತಿ ಮೂಡಿಸಿದರು.

ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಸಂಚಾರ ವೃತ್ತದ ಸಿಪಿಐ ದೇವರಾಜ್ ಟಿ.ವಿ., ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್ ಹೆಚ್.ಎನ್. ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಯಾಣಿಕರ ಹಿತವೇ ನಮ್ಮ ಆದ್ಯತೆ ಎಂಬ ಸಂದೇಶವನ್ನು ಪೊಲೀಸರು ನೀಡಿದ್ದು, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುವುದನ್ನು ತಡೆಯಲು ಮುಂದಿನ ದಿನಗಳಲ್ಲಿಯೂ ತಪಾಸಣೆ ಮುಂದುವರಿಸುವ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...